ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು…

237
firstsuddi

ಬೆಂಗಳೂರು : ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ನಿನ್ನೆ ಕೆ.ಆರ್. ಪುರಂ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಡಿ.ಕೆ. ಶಿವಕುಮಾರ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಎ.ಕೃಷ್ಣಪ್ಪ ಅವರ ಸಾವಿಗೆ ಬೈರತಿ ಬಸವರಾಜ್ ಅವರು ಕಾರಣ ಎಂಬ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಿ ಶಾಸಕ ಸತೀಶ್ ರೆಡ್ಡಿ ನೇತೃತ್ವದ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಇನ್ನು ಮುಂದೆ ಈ ರೀತಿಯ ಹೇಳಿಕೆಗಳನ್ನು ನೀಡದಂತೆ ಡಿ.ಕೆ. ಶಿವಕುಮಾರ್ ಅವರಿಗೆ ನಿರ್ಬಂಧ ಹೇರುವಂತೆ ದೂರಿನಲ್ಲಿ ತಿಳಿಸಿದ್ದಾರೆ.