ಬೆಂಗಳೂರು : ಮಾಜಿ ಸಚಿವ ಪ್ರೊ.ಮಮ್ತಾಜ್ ಅಲಿ ಖಾನ್ ಅವರು ಇಂದು ಮುಂಜಾನೆ ನಗರದ ತಮ್ಮ ಗಂಗಾನಗರದ ನಿವಾಸದಲ್ಲಿ ನಿಧನರಾಗಿದ್ದಾರೆ.94 ವರ್ಷ ವಯಸ್ಸಾಗಿದ್ದ ಮಮ್ತಾಜ್ ಅಲಿ ಖಾನ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
2008ರಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟದಲ್ಲಿ ಅಲ್ಪಸಖ್ಯಾತ ಕಲ್ಯಾಣ, ಹಜ್ ವಕ್ತ್ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದ ಮಮ್ತಾಜ್ ಅಲಿ ಖಾನ್ ಅವರು ಬೆಂಗಳೂರು ಕೃಷಿ ವಿವಿಯಲ್ಲಿ ಸಮಾಜಶಾಸ್ತ್ರ ಪ್ರೊಫೆಸರ್ ಆಗಿ ಸಹ ಕೆಲಸ ಮಾಡಿದ್ದಾರೆ. ಮಮ್ತಾಜ್ ಅಲಿ ಖಾನ್ ಅವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ 1.30 ಕ್ಕೆ ಅವರ ಅಂತ್ಯ ಕ್ರಿಯೆ ನಗರದ ಖುದ್ದುಸ್ ಸಾಹೇಬ್ ಖಬ್ರಸ್ಥಾನ್ ನಲ್ಲಿ ನೆರವೇರಲಿದೆ.
ಮಾಜಿ ಸಚಿವ ಮಮ್ತಾಜ್ ಅಲಿಖಾನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ, ಹಜ್, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದ ಅವರು, ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಆತ್ಮೀಯ ಸ್ನೇಹಿತ ಹಾಗೂ ಸರಳ ಹಾಗೂ ಸಜ್ಜನ ಚಿಂತನಾಶೀಲ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಸಿಎಂ ಸಂತಾಪ ವ್ಯಕ್ತಪಡಿಸಿದ್ದಾರೆ.










