ಕಲಬುರಗಿ : ಮಾಜಿ ಸಚಿವ ವೈಜನಾಥ ಪಾಟೀಲ್(82) ಇಂದು ಅನಾರೋಗ್ಯದಿಂದ ನಿಧನರಾಗಿದ್ದು, ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೈಜನಾಥ ಪಾಟೀಲ್ ಅವರನ್ನು ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದು, ವೈಜನಾಥ ಪಾಟೀಲ್ ಅವರು ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ನಾಳೆ ಮಧ್ಯಾಹ್ನ ಚಿಂಚೋಳಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.










