ಮಾಜಿ ಸಚಿ ವೈಜನಾಥ್ ಪಾಟೀಲ್ ನಿಧನಕ್ಕೆ ಗಣ್ಯರ ಸಂತಾಪ…

210
firstsuddi

ಬೆಂಗಳೂರು : ಮಾಜಿ ಸಚಿವ ವೈಜನಾಥ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದು, “ಹುಟ್ಟು ಹೋರಾಟಗಾರರೂ, ಮಾಜಿ ಸಚಿವರೂ ಆದಂತಹ ವೈಜನಾಥ ಪಾಟೀಲರ ನಿಧನದಿಂದ ಅತೀವ ದುಃಖವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ. ಪಾಟೀಲರ ನಿಧನದಿಂದ ನೇರ ನಡೆ ನುಡಿಯ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಶ್ರೀಯುತರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ” ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸಚಿವ ವೈಜನಾಥ್ ಪಾಟೀಲ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, “ಆತ್ಮೀಯರಾಗಿದ್ದ ಮಾಜಿ ಸಚಿವ ವೈಜನಾಥ ಪಾಟೀಲ್ ನಿಧನದಿಂದ ಆಘಾತವಾಗಿದೆ. ಉತ್ತರ ಕರ್ನಾಟಕದ ಅಭಿವೃದ್ದಿಗಾಗಿ ಹೋರಾಟ ನಡೆಸುತ್ತಾ ಬಂದಿದ್ದ ಪಾಟೀಲ್, ಹೈದರಾಬಾದ್ ಕರ್ನಾಟಕಕ್ಕೆ ವಿಶೇಷಸ್ಥಾನಮಾನ ಪಡೆಯಲು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು” ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸಚಿವ ವೈಜನಾಥ್ ಪಾಟೀಲ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದು, “ಮಾಜಿ ಸಚಿವ, 371ಜೆ ವಿಧಿ ಹೋರಾಟಗಾರ ವೈಜನಾಥ ಪಾಟೀಲರ ನಿಧನ ತೀವ್ರ ಬೇಸರ ತರಿಸಿದೆ.ಹೆಚ್.ಡಿ. ದೇವೇಗೌಡರ ಸಂಪುಟದಲ್ಲಿ ಸಚಿವರಾಗಿದ್ದ ಅವರು, ಈಗಿನ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸದಾ ಮಿಡಿಯುತ್ತಿದ್ದರು. ಈ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲು ಎರಡು ದಶಕಗಳ ಹಿಂದೆ ಧ್ವನಿ ಎತ್ತಿ ಹೋರಾಟ ಆರಂಭಿಸಿದ್ದೇ ಪಾಟೀಲರು.ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ.