ಮಂಗಳೂರು : ಕಾಫಿ ಡೇ ಮಾಲೀಕ ಸಿದ್ದಾರ್ಥ್​ ನಾಪತ್ತೆ…

484
firstsuddi

ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಅಳಿಯ ಹಾಗೂ ಕಾಫಿ ಡೇ ಮಾಲೀಕ ಸಿದ್ದಾರ್ಥ್​ ನೇತ್ರಾವತಿ ಸೇತುವೆ ಬಳಿ ಸೋಮವಾರ ರಾತ್ರಿ ನಾಪತ್ತೆಯಾಗಿದ್ದಾರೆ. ಸೋಮವಾರ ಸಂಜೆ ಬೆಂಗಳೂರಿನಿಂದ ಇನೋವಾ ಕಾರಿನಲ್ಲಿ ಮಂಗಳೂರಿಗೆ ಆಗಮಿಸಿದ್ದರು. ರಾತ್ರಿ 7.30ರ ವೇಳೆ ಕಾರಿನಲ್ಲಿ ಚಾಲಕನ ಜತೆ ಉಳ್ಳಾಲದತ್ತ ತೆರಳಿ ಕಾರನ್ನು ಒಂದು ಸೇತುವೆಯ ಬದಿ ನಿಲ್ಲಿಸಲು ಹೇಳಿ, ಏಕಾಂಗಿಯಾಗಿ ಸೇತುವೆಯಲ್ಲಿ ನಡೆದುಕೊಂಡು ಹೋಗಿದ್ದಾರೆ. ಆ ಬಳಿಕ ಚಾಲಕ ಸುಮಾರು ಎರಡು ಗಂಟೆ ಕಾದರೂ ಸಿದ್ಧಾರ್ಥ ಬರಲಿಲ್ಲ. ಇದಕ್ಕೆ ಆತಂಕಿತರಾದ ಚಾಲಕ ಪೊಲೀಸ್ ಹಾಗೂ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದಾರೆ. ಸಿದ್ಧಾರ್ಥ ಅವರು ಸೇತುವೆಯ ಮಧ್ಯಭಾಗದಿಂದ ನದಿಗೆ ಹಾರಿರಬಹುದೆಂದು ಶಂಕೆ ಹಿನ್ನೆಲೆಯಲ್ಲಿ ದೇಹಕ್ಕಾಗಿ ಬೋಟ್ ಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಶಸಿಕಾಂತ್ ಸೇಂಥಿಲ್, ಡಿಸಿಪಿಗಳಾದ ಲಕ್ಷ್ಮೀ ಗಣೇಶ್, ಹನುಮಂತರಾಯ, ಎಸಿಪಿ ಶ್ರೀನಿವಾಸ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.