ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ…

79
firstsuddi

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದೆ. ಲೋಕಸಭೆ ಮಾದರಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ನೀಡುತ್ತಿರುವ ಪ್ರಶಸ್ತಿ ಇದಾಗಿದೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಬಿ.ಎಸ್.ಯಡಿಯೂರಪ್ಪನವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಯಡಿಯೂರಪ್ಪನವರಿಗೆ ಬೆಳ್ಳಿಯ ಪ್ರಶಸ್ತಿ ಫಲಕ ಪ್ರದಾನ ಮಾಡಿ ಗೌರವ ಸಲ್ಲಿಸಲಾಗಿದೆ.

ಈ ವೇಳೆ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಈ ವರ್ಷದಿಂದ ಅತ್ಯುತ್ತಮ ಶಾಸಕ ಪ್ರಶಸ್ತಿ ಕೊಡುತ್ತಿದ್ದೇವೆ. ಮೊದಲ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಯಡಿಯೂರಪ್ಪನವರಿಗೆ ನೀಡಲಾಗುತ್ತಿದೆ. ಯಡಿಯೂರಪ್ಪ ಅನೇಕ ಜವಾಬ್ದಾರಿ ಹೊತ್ತವರು, ಉತ್ತಮ ಆಡಳಿತ ಕೊಟ್ಟವರು. ಯಡಿಯೂರಪ್ಪನವರ ಹೆಸರು ಆಯ್ಕೆ ಮಾಡಿದ್ದು ನನಗೆ ಹೆಮ್ಮೆ ತಂದಿದೆ ಎಂದು ಅತ್ಯುತ್ತಮ ಶಾಸಕರ ಹೆಸರು ಘೋಷಣೆ ಮಾಡಲಾಗಿದೆ. ಪ್ರತಿ ವರ್ಷಕೊಮ್ಮೆ ಉತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.