ಮಾಜಿ ಸಿಎಂ ಸಿದ್ದರಾಮಯ್ಯಗೆ ಆರ್​ಎಸ್​ಎಸ್‍ನಿಂದ ಚಡ್ಡಿ ಪಾರ್ಸಲ್!

54
firstsuddi

ಮಂಡ್ಯ : ರಾಜ್ಯ ರಾಜಕೀಯದಲ್ಲಿ ಆರ್​ಎಸ್​ಎಸ್​ ಚಡ್ಡಿ ವಿಷಯ ಭಾರೀ ಸದ್ದು ಮಾಡ್ತಿದೆ. ಇತ್ತೀಚೆಗೆ ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರ್​ಎಸ್​ಎಸ್​ ಚಡ್ಡಿ ಸುಟ್ಟು ಹಾಕುತ್ತೇವೆಂದು ಹೇಳಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದೀಗ ಆರ್​ಎಸ್​ಎಸ್​ ಕಾರ್ಯಕರ್ತರು ಸಹ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಜಿಲ್ಲೆಯ ಕೆ.ಆರ್. ಪೇಟೆಯ ಆರ್​ಎಸ್​ಎಸ್​ ಕಾರ್ಯಕರ್ತರು ಸಿದ್ದರಾಮಯ್ಯನವರಿಗೆ ಆರ್​ಎಸ್​ಎಸ್​ ನ ಖಾಕಿ ಚಡ್ಡಿಯನ್ನ ಪಾರ್ಸಲ್ ಮಾಡಿದ್ದಾರೆ. ಬಾಕ್ಸ್ ನಲ್ಲಿ ಆರ್​ಎಸ್​ಎಸ್​ ಚಡ್ಡಿ ಹಾಕಿ ಸಿದ್ದು ಮನೆಯ ವಿಳಾಸಕ್ಕೆ ಪಾರ್ಸಲ್ ಮಾಡಿದ್ದಾರೆ.

ಇನ್ನೂ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಹತ್ತಾರು ಗಲಭೆಗಳ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಬೆಂಕಿ ಹಾಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಶಿವಮೊಗ್ಗ ಮತ್ತು ಹುಬ್ಬಳ್ಳಿಯ ಗಲಭೆ ಹಿಂದೆ ಕಾಂಗ್ರೆಸ್ ಇದೆ. ಆದರೆ ಆರ್​ಎಸ್​ಎಸ್​ ಒಂದು ಸೇವಾ ಸಂಸ್ಥೆಯಾಗಿದ್ದು, ದೇಶಭಕ್ತರನ್ನು ನಿರ್ಮಾಣ ಮಾಡುತ್ತದೆ. ಇದಕ್ಕೆ ಕೈ ಹಾಕಿದ ನೆಹರೂ ಮತ್ತು ಇಂದೀರಾ ಗಾಂಧಿ ಸುಟ್ಟು ಹೋಗಿದ್ದಾರೆ. ಕಾಂಗ್ರೆಸ್ ಬೆಂಕಿಗೆ ಕೈ ಹಾಕಿ ಸುಟ್ಟು ಹೋಗುತ್ತದೆ. ಆರ್​ಎಸ್​ಎಸ್​ ಚಡ್ಡಿಗೆ ಬೆಂಕಿ ಹಾಕಲು ಸಿದ್ದರಾಮಯ್ಯ ಹೇಳಿದ್ದಾರೆ, ಅವರೇ ಸುಟ್ಟು ಹೋಗುತ್ತಾರೆ ಎಂದು ಎಂದಿದ್ದಾರೆ.

ರಾಜ್ಯದಲ್ಲಿ ಅತಂತ್ರ ಸ್ಥಿತಿಯನ್ನು ಉಂಟು ಮಾಡಲು ಕಾಂಗ್ರೆಸ್ ಬೆಂಕಿ ಹಚ್ಚಲು ಮುಂದಾಗಿದೆ. ಮುಂದಿನ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ನಾಯಕರು ಇಲ್ಲ, ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಆದ ಗಲಾಟೆಗಳಿಗೆ ಅವರ ವೈಫಲ್ಯವೇ ಕಾರಣ. ರಾಜ್ಯದಲ್ಲಿ ನಡೆಯುವ ಒಳ್ಳೆಯ ಕಾರ್ಯಗಳಿಗೆ ಸಿದ್ದರಾಮಯ್ಯ ಬೆಂಬಲ ಮಾಡಲ್ಲ. ಅವರು ಎಲ್ಲಾ ವಿಚಾರದಲ್ಲಿ ಮಾತನಾಡಬೇಕು ಅಂತ ಮಾತನಾಡತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.