ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಸಿ.ಬಲರಾಮ್ ಅವರು ನಿಧನರಾಗಿದ್ದಾರೆ.
ಮಾರ್ಚ್.16 ರಂದು ನಡೆದ ಮೈಮುಲ್ ಚುನಾವಣೆಯ ಸೋಲಿನಿಂದಾಗಿ ಸಂಪೂರ್ಣವಾಗಿ ಮನನೊಂದಿದ್ದ ಕೆ.ಸಿ.ಬಲರಾಮ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು. ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ಇನ್ನು ಆತ್ಮಿಯ ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ಕುಪ್ಯಾ ಗ್ರಾಮಕ್ಕೆ ಆಗಮಿಸಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.










