ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ಹಿನ್ನಲೆ, ಮೈಸೂರಿನ ಸಿದ್ದರಾಮಯ್ಯ ಅವರ ನಿವಾಸವನ್ನು ಸೀಲ್‍ಡೌನ್ ಮಾಡಲಾಗಿದೆ. ನಗರದ ಟಿ.ಕೆ ಲೇಔಟ್ ನಲ್ಲಿರುವ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿಗಳು ಔಷಧಿ ಸಿಂಪಡಿಸಿ, ಬ್ಯಾರಿಕೇಡ್ ಅಳವಡಿಸಿ ಸೀಲ್‍ಡೌನ್ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಹಿರಿಯ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಇದ್ದ ಕಾರಣ ಕಳೆದ 3-4 ದಿನ ಮೈಸೂರಿನ ಮನೆಯಲ್ಲೇ ವಾಸ್ತವ್ಯ ಹೂಡಿದ್ದರು. ಆದ್ದರಿಂದ ಮೈಸೂರಿನ ಮನೆಯನ್ನು ಸೀಲ್‍ಡೌನ್ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕುಟುಂಬಸ್ಥರಿಗೂ ಈಗಾ ಆತಂಕ ಶುರುವಾಗಿದ್ದು, ಎಲ್ಲರನ್ನೂ ಹೋಂ ಕ್ವಾರಂಟೈನ್‍ನಲ್ಲಿರಲು ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.










