ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಶಾಸಕ ರಮೇಶ್ ಜಾರಕಿಹೊಳಿ…

191
firstsuddi

ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ನಗರದ ವೆಗಾಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕ ರಮೇಶ್ ಜಾರಕಿಹೊಳಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು “ ಏನಯ್ಯಾ ರಮೇಶ ಬಾ ಅಂದಾಗ ಬರಲಿಲ್ಲ, ಈಗಾ ಬಂದಿದ್ಯಾ” ಎಂದು ಕಾಲೆಳೆದಿದ್ದಾರೆ. ಕೂಡಲೇ ರಮೇಶ್ ಜಾರಕಿಹೊಳಿ ಅವರು “ ನೀವು ನಮ್ಮ ನಾಯಕರು ನಮಗೆ ನಿಮ್ಮ ಆರೋಗ್ಯ ಮುಖ್ಯ ಹಾಗಾಗಿ ಬಂದೆ” ಎಂದು ಉತ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನಮ್ಮ ನಾಯಕರು, ಅವರು ಈಗಾ ಆರೋಗ್ಯವಾಗಿದ್ದಾರೆ. ನಾಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ. ನಾನು ಗೆದ್ದಾಗಲೂ ಅವರೇ ನಮ್ಮ ನಾಯಕರು ಎಂದು ಹೇಳಿದ್ದೆ. ಈಗಾ ನಾನು ಪಕ್ಷ ಬದಲಾವಣೆ ಮಾಡಿದ್ದರೂ ಅವರೇ ನಮ್ಮ ನಾಯಕರು ಎಂದು ಹೇಳಿದರು.