ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈ ಬಂಟ, ದಲಿತ ಮುಖಂಡ ಕೌನ್ಸಿಲರ್ ಶ್ರೀನಿವಾಸ್ ಎಂಬವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಎಂ ಶ್ರೀನಿವಾಸ್ ಅವರು ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡರಾಗಿದ್ದು, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷರೂ ಆಗಿದ್ದರು. ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಆರು ಜನ ಅಪರಿಚಿತ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.
ಎದೆ, ತಲೆ, ದೇಹದ ಮೇಲೆ ಗಂಭೀರ ಗಾಯಗೊಂಡಿದ್ದ ಅವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










