ಬೆಂಗಳೂರು : ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಕೆಎಸ್‌ಡಿಎಲ್ ಮಾಜಿ ಅಧ್ಯಕ್ಷ, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ತುರ್ತು ವಿಚಾರಣೆ ನಡೆಸಿ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ನಿನ್ನೆ ಹೈಕೋರ್ಟ್ ಗೆ ವಿರೂಪಾಕ್ಷಪ್ಪ ಮನವಿ ಮಾಡಿಕೊಂಡಿದ್ದರು. ಆದರೆ ತಕ್ಷಣ ವಿಚಾರಣೆ ನಡೆಸಲು ಒಪ್ಪದ ಕೋರ್ಟ್ ಇಂದಿಗೆ ಮುಂದೂಡಿತ್ತು. ಅದರಂತೆ ಇಂದು ಹೈಕೋರ್ಟ್ ನ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅರ್ಜಿ ವಿಚಾರಣೆ ನಡೆಸಿದರು.
5 ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿ ನೀಡುವಂತೆ ಕೆ.ನಟರಾಜನ್ ಹೇಳಿದ್ದಾರೆ. ಅಲ್ಲದೇ ಆದೇಶದ ಪ್ರತಿ ಸಿಕ್ಕ 48 ಗಂಟೆಗಳಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಎಂದು ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿದರು.










