ಮಾನಸಿಕ ಖಿನ್ನತೆ : ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ…

76
firstsuddi

ಮೈಸೂರು : ಸಿಎ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಚಂದನ (23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆಯ ತಂದೆ ಕೆ.ಎಸ್.ಆರ್.ಟಿ.ಸಿ. ನೌಕರ ಮತ್ತು ತಾಯಿ ಕೆನರಾ ಬ್ಯಾಂಕ್ ಸಿಬ್ಬಂದಿಯಾಗಿದ್ದಾರೆ.

ಎಂಕಾಂ ಮುಗಿಸಿದ್ದ ಚಂದನ ಸಿಎಗೆ ಸಿದ್ಧತೆ ಮಾಡಿಕೊಂಡಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿ ಮನೆಯ ಕೊಠಡಿಯಲ್ಲಿ ನಿನ್ನೆ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಳಗ್ಗೆಯಾದರೂ ಮಗಳು ಆಚೆ ಬಾರದ ಹಿನ್ನಲೆ ಪೋಷಕರು ಬಾಗಿಲು ಒಡೆದು ನೋಡಿದಾಗ, ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.