ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ…

55
firstsuddi

ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಾವನೂರು ಗ್ರಾಮದ ಗಜೇಂದ್ರ ಈರಪ್ಪ ಹುನ್ನೂರಿ(60), ದ್ರಾಕ್ಷಾಯಿಣಿ ಗಜೇಂದ್ರ ಹುನ್ನೂರಿ (45) ಮೃತರು. ದಂಪತಿಗೆ ಓರ್ವ ಮಗಳಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದರು.

ದಂಪತಿಗಳು ಮನೆಯಿಂದ ಹೊರಬರದೆ ಇದ್ದುದ್ದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ನಿನ್ನೆ ಬಾಗಿಲು ತೆಗೆದು ನೋಡಿದಾಗ ದಂಪತಿ ಕೊಲೆ ಆಗಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿರುವ ಯಮಕನಮರಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.