ಬೆಂಗಳೂರು: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶನಿವಾರ ತಡರಾತ್ರಿ ನಗರದ ಹನುಮಂತ ನಗರದ ಶ್ರೀನಿವಾಸ ನಗರ ಬಸ್ ನಿಲ್ದಾಣದ ಬಳಿ ನಡೆದಿದೆ.
ವಿಜಯ್ (21) ಹತ್ಯೆಯಾದ ಯುವಕ. ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ ನಡೆದು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಆಟೋದಲ್ಲಿ ಬಂದ ದುಷ್ಕರ್ಮಿಗಳು ಯುವಕನ ಮೇಲೆ ಅಟ್ಯಾಕ್ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.










