ಮಾರಕಾಸ್ತ್ರಗಳಿಂದ ಯುವಕನ ಭೀಕರ ಹತ್ಯೆ…

48
firstsuddi

ಬೆಳಗಾವಿ: ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಯುವಕನನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಮಾರಿಹಾಳ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ್ (23) ಎಂಬ ಯುವಕನನ್ನು ನಾಲ್ಕೈದು ಜನ ಯುವಕರು ಸೇರಿ ಹತ್ಯೆಗೈದಿದ್ದಾರೆ. ಮಾರಿಹಾಳ ಸರ್ಕಾರಿ ಕನ್ನಡ ಶಾಲಾ ಕೊಠಡಿಯ ಎದುರು ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವಿ. ಸ್ನೇಹ ಹಾಗೂ ಮಾರಿಹಾಳ ಇನ್ಸ್‌ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.