ದಾವಣಗೆರೆ : ವೃದ್ಧ ದಂಪತಿ ಬರ್ಬರ ಹತ್ಯೆ!

75
firstsuddi

ದಾವಣಗೆರೆ : ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ವೃದ್ಧ ದಂಪತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಎಲೆ ಬೇತೂರ ಗ್ರಾಮದಲ್ಲಿ ಜರುಗಿದೆ. ಗುರುಸಿದ್ದಯ್ಯ (80) ಸರೋಜಮ್ಮ (75) ಕೊಲೆಯಾದ ವೃದ್ಧ ದಂಪತಿ.

ಮೂರು ಹೆಣ್ಣು ಮಕ್ಕಳನ್ನು ಮದುವೆ ಮಾಡಿ ಕೊಟ್ಟಿದ್ದ ದಂಪತಿ, ಇಬ್ಬರೇ ಮನೆಯಲ್ಲಿ ವಾಸವಾಗಿದ್ದರು. ನಿನ್ನೆ ತಡರಾತ್ರಿ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಕೊಲೆ ಮಾಡಿ ಬಳಿಕ ಬಾಗಿಲು ಹಾಕಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆ ಪಕ್ಕದ ಮನೆಯವರು ಅವರನ್ನ ಭೇಟಿ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿದ್ದು, ಎಸ್ಪಿ ಸಿ.ಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.