ಮಾಲೆ : ಮಾಲ್ಡೀವ್ಸ್ ರಾಜಧಾನಿ ಮಾಲೆಯ ಇಕ್ಕಟ್ಟಾದ ವಸತಿಗೃಹದಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಈ ಅಗ್ನಿ ದುರಂತದಲ್ಲಿ 10 ಜನ ಸಾವನ್ನಪಿದ್ದಾರೆ ಮತ್ತು ಹಲವರು ಗಂಭೀರ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಇದರಲ್ಲಿ 9 ಜನ ಭಾರತೀಯರು ಎಂದು ವರದಿಯಲ್ಲಿ ತಿಳಿಸಲಾಗಿದೆ.
ನೆಲ ಅಂತಸ್ತಿನ ವಾಹನ ರಿಪೇರಿ ಗ್ಯಾರೇಜ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಂದಿಸಲು ಸುಮಾರು ನಾಲ್ಕು ಗಂಟೆಗಳ ಕಾಲ ಬೇಕಾಯಿತು. ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದು, ಇದೀಗ ಕಟ್ಟಡದ ಮೇಲಿನ ಮಹಡಿಯಿಂದ 10 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತರಲ್ಲಿ ಒಂಬತ್ತು ಮಂದಿ ಭಾರತ ಮೂಲದವಾರಗಿದ್ದು, ಓರ್ವ ಬಾಂಗ್ಲಾದೇಶದ ಪ್ರಜೆಯಾಗಿದ್ದಾನೆ ಎಂದು ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೇರೆ ಬೇರೆ ದೇಶದಿಂದ ಇಲ್ಲಿಗೆ ಬಂದಿದ್ದ ಮತ್ತು ಮಾಲ್ಡೀವ್ಸ್ ನಲ್ಲಿ ವಾಸವಾಗಿದ್ದ ಉದ್ಯೋಗಿಗಳು ಈ ಕಟ್ಟದಲ್ಲಿ ಅರ್ಧದಷ್ಟು ಜನ ಇದ್ದರು ಮತ್ತು ಹೆಚ್ಚಾಗಿ ಬಾಂಗ್ಲಾದೇಶ, ಭಾರತ, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾದಿಂದ ಬಂದವರು ಎಂದು ಹೇಳಲಾಗುತ್ತದೆ. ಯಾವುದೇ ಸಹಾಯಕ್ಕಾಗಿ, HCI ಅನ್ನು ಈ ಸಂಖ್ಯೆಗಳಲ್ಲಿ ಸಂಪರ್ಕಿಸಿ ಎಂದು +9607361452 ; +9607790701 ಮಾಲ್ಡೀವ್ಸ್ ಟ್ವಿಟ್ ಮಾಡಿದೆ.










