ಮಾಸ್ಕ್ ಕಡ್ಡಾಯ.. ಕೋವಿಡ್ ಪರೀಕ್ಷೆ ಹೆಚ್ಚಿಸಲು ಮೋದಿ ಸಲಹೆ…

46
firstsuddi

ನವದೆಹಲಿ : ಚೀನಾ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಮತ್ತು ಭಾರತದಲ್ಲಿ ಒಮಿಕ್ರಾನ್ ಉಪತಳಿ ಬಿಎಫ್.7 ಲಗ್ಗೆಯಿಟ್ಟಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಯಿತು.

ಸಭೆ ಬಳಿಕ ಮಾತನಾಡಿರುವ ಪ್ರಧಾನಿ ಮೋದಿ, ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರೂ ಮಾಸ್ಕ್ ಧರಿಸಬೇಕು. ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಜೊತೆಗೆ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಯನ್ನು ಹೆಚ್ಚಳ ಮಾಡಬೇಕಿದೆ ಎಂದು ಸಲಹೆ ನೀಡಿದ್ದಾರೆ.

ಈಗಾಗಲೇ ಭಾರತದಲ್ಲಿ ಪತ್ತೆಯಾಗಿದ್ದ ಎಲ್ಲಾ 4 ಬಿಎಫ್.7 ಸೋಂಕು ಪ್ರಕರಣಗಳಲ್ಲೂ ರೋಗಿಗಳು ಚೇತರಿಕೆ ಕಂಡು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಹೀಗಾಗಿ ಈ ಉಪ ರೂಪಾಂತರಿ ಕುರಿತಾಗಿ ಜನತೆ ಆತಂಕ ಪಡುವ ಅಗತ್ಯತೆ ಸದ್ಯಕ್ಕೆ ಇಲ್ಲ ಎಂದರು.

ಆದಾಗ್ಯೂ ದೇಶದ ಎಲ್ಲಾ ರಾಜ್ಯ ಸರ್ಕಾರಗಳೂ ಕೋವಿಡ್ ನ ಮತ್ತೊಂದು ಸಂಭಾವ್ಯ ಅಲೆ ಎದುರಿಸಲು ಆಸ್ಪತ್ರೆಗಳು ಸುಸಜ್ಜಿತವಾಗಿರಬೇಕು. ಮೂಲಸೌಕರ್ಯ ಸಂಬಂಧಿ ಸಮಸ್ಯೆಗಳಿದ್ದರೆ ಈಗಲೇ ಬಗೆಹರಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಸೂಚನೆ ನೀಡಿದರು.