ಮಾಸ್ಕ್ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ-ಓರ್ವ ಸಾವು, ಇಬ್ಬರಿಗೆ ಗಾಯ…

128
firstsuddi

ನವದೆಹಲಿ : ಮಾಸ್ಕ್ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ಮೃತಪಟ್ಟಿರುವ ಘಟನೆ ದೆಹಲಿಯ ಮಯಾಪುರಿ ನಡೆದಿದೆ. ಮೃತನನ್ನು ಜುಗಲ್ ಕಿಶೋರ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗಿನ ಜಾವ 3:54ರ ಸುಮಾರಿಗೆ ಕಾರ್ಖಾನೆಯ ಮೂರನೇ ಮಹಡಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯವನ್ನು ಮಾಡಿದ್ದು, ಈ ವೇಳೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿಕೊಂಡಿದ್ದ ಮೂವರು ಯುವಕರನ್ನು ರಕ್ಷಣೆ ಮಾಡಿದ್ದು, ಅವರಲ್ಲಿ ಓರ್ವನ ಸ್ಥಿತಿ ತುಂಬಾ ಗಂಭೀರವಾದ ಕಾರಣ ದೀನ್ ದಯಾಳ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟೊತ್ತಿಗಾಗಲೇ ಯುವಕ ಮತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.