ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ಪ್ರಕರಣ-ಅಶ್ವಿನಿಗೌಡ ಸೇರಿ 15ಮಂದಿ ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣು…

395
firstsuddi

ಬೆಂಗಳೂರು : ಮಿಂಟೋ ಆಸ್ಪತ್ರೆಯ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ ಅವರು ಸೇರಿದಂತೆ 15 ಮಂದಿ ಕಾರ್ಯಕರ್ತರು ಪೊಲೀಸರಿಗೆ ಶರಣಾಗಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆ ಪಡೆದು ಕೆಲವು ರೋಗಿಗಗಳು ಕಣ್ಣನ್ನು ಕಳೆದುಕೊಂಡಿದ್ದು, ಇದನ್ನು ಪ್ರಶ್ನಿಸಲು ಕರವೇ ಕಾರ್ಯಕರ್ತರು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಕಾರ್ಯಕರ್ತರು ಹಾಗೂ ವೈದ್ಯರ ನಡುವೆ ವಾಗ್ವಾದ ನಡೆದಿದ್ದು, ಅಲ್ಲದೇ ಕರವೇ ಕಾರ್ಯಕರ್ತರು ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ. ಕೂಡಲೇ ಅವರನ್ನು ಬಂಧಿಸಬೇಕು ಎಂದು ಒಂದು ವಾರದಿಂದ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದರು. ಹೀಗಾಗಿ ಇಂದು ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ ಅವರು ಸೇರಿದಂತೆ 15ಮಂದಿ ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣಾಗಿದ್ದು, ವಿವಿ ಪುರಂ ಠಾಣಾ ಪೊಲೀಸರು ಅವರನ್ನು ಬಂಧಿಸಿದ್ದಾರೆ.