ಮಿಗ್-21 ಯುದ್ಧ ವಿಮಾನ ಪತನ – ಮೂವರು ಸಾವು…

50
firstsuddi

ಜೈಪುರ್: ಭಾರತೀಯ ವಾಯುಸೇನೆಯ ಮಿಗ್-21 ಯುದ್ಧ ವಿಮಾನ ಪತನಗೊಂಡು ಮೂವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಹನುಮಾನ್‍ಗಢದಲ್ಲಿ ಇಂದು ನಡೆದಿದೆ.

ಪೈಲಟ್ ಮತ್ತು ಸಹ ಪೈಲಟ್ ಸುರಕ್ಷಿತವಾಗಿ ಪಾರಾಗಿದ್ದಾರೆ. ಬಹ್ಲೋಲ್‌ನಗರ ಜಿಲ್ಲೆಯಲ್ಲಿರುವ ಮನೆಯ ಮೇಲೆ ವಿಮಾನ ಅಪಘಾತಕ್ಕೀಡಾಗಿದ್ದು, ಇಬ್ಬರು ಮಹಿಳೆಯರು ಸೇರಿ ಮೂವರು ಸಾರ್ವಜನಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನವು ಸೂರತ್‌ಗಢ ಏರ್ ಫೋರ್ಸ್ ಸ್ಟೇಷನ್‌ನಿಂದ ಟೇಕಾಫ್ ಆಗಿದ್ದು, ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲಿ ಈ ಅವಘಡ ಸಂಭವಿಸಿದೆ. ವಿಮಾನ ಪತನಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.