ಮೀನು ಸಂಗ್ರಹಣಾ ಘಟಕದಿಂದ ಅಮೋನಿಯಾ ಅನಿಲ ಸೋರಿಕೆ, ಸುಮಾರು 70ಮಂದಿ ಕಾರ್ಮಿಕರು ಅಸ್ವಸ್ಥ…

253
firstsuddi

ಉಡುಪಿ : ಮೀನು ಸಂಸ್ಕರಣಾ ಕೇಂದ್ರದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ 70ಕ್ಕೂ ಅಧಿಕ ಮಂದಿ ಕಾರ್ಮಿಕರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಬಗ್ವಾಡಿ ಸಮೀಪದ ದೇವಲ್ಕುಂದದಲ್ಲಿರುವ ಮಲ್ಪೆ ಫ್ರೆಶ್ ಮರೈನ್ ಎಕ್ಸ್ಪೋರ್ಟ್ ಪ್ರೈವೆಟ್ ಲಿಮಿಟೆಡ್‍ನ ಘಟಕದಲ್ಲಿ ನಡೆದಿದೆ. ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿದ್ದ ಘಟಕದಿಂದ ಅಮೋನಿಯಾ ಅನಿಲ ಸೋರಿಕೆಯಾದ ಪರಿಣಾಮ ಸುಮಾರು 20 ಮಹಿಳಾ ಕಾರ್ಮಿಕರು ವಾಂತಿ ಹಾಗೂ ಎದೆ ನೋವಿನಿಂದ ತೀವ್ರ ಅಸ್ವಸ್ಥಗೊಂಡಿದ್ದು, ಕೂಡಲೇ ಅಸ್ವಸ್ಥಗೊಂಡ ಕಾರ್ಮಿಕರನ್ನು ಕುಂದಾಪುರದ ಆದರ್ಶ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಕಾಂಡ್ಲೂರು ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.