ಮೀಸಲು ಅರಣ್ಯ ಪ್ರದೇಶದಲ್ಲಿ 60ಕ್ಕೂ ಹೆಚ್ಚು ಫೈರಿಂಗ್ ಕಾಟ್ರೇಜ್ ಪತ್ತೆ…

59
firstsuddi

ಮೂಡಿಗೆರೆ : ತಾಲೂಕಿನ ಸಾರಗೋಡು-ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ ಸುಮಾರು 60ಕ್ಕೂ ಹೆಚ್ಚು ಬಂದೂಕಿನ ಖಾಲಿ ಕಾಟ್ರೇಜ್ ಗಳು ಪತ್ತೆಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಜಿಲ್ಲೆಯಲ್ಲಿ ಪೊಲೀಸರು ಬಂದೂಕುಗಳನ್ನು ಪತ್ತೆ ಹಚ್ಚಿದ ಬೆನ್ನೆಲ್ಲೇ ವಗೇರ್ ನಿಂದ ಕನ್ನಹಳ್ಳಿಗೆ ಸಂಪರ್ಕ ಕಲ್ಪಿಸುವ ಅರಣ್ಯ ಪ್ರದೇಶದ ರಸ್ತೆಯಲ್ಲಿ ಕಾಟ್ರೇಜ್ ಗಳು ಕಂಡು ಬಂದಿವೆ.

ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಾಫಿ ಬೆಳೆಯುವುದರಿಂದ, ಬೆಳಗಾರರು ಕಾಡುಪ್ರಾಣಿಗಳು, ಕಳ್ಳರಿಂದ ಬೆಳೆ ಹಾಗೂ ಆತ್ಮರಕ್ಷಣೆಗೆ ಅಕ್ರಮ-ಸಕ್ರಮವಾಗಿ ಬಂದೂಕುಗಳನ್ನ ಮನೆಯಲ್ಲಿ ಇಟ್ಟುಕೊಂಡಿರುತ್ತಾರೆ. ಬಂದೂಕುಗಳನ್ನ ಪ್ರಾಣಿ ಬೇಟೆಗೂ ಬಳಸುತ್ತಾರೆ. ಇದೀಗ ಅರಣ್ಯ ಮೀಸಲು ಪ್ರದೇಶದಲ್ಲಿ ಪತ್ತೆಯಾಗಿರುವ ಕಾಟ್ರೇಜ್ ಗಳು ಪ್ರಾಣಿ ಬೇಟೆಗಾಗಿ ಬಳಸಿದ್ದಾರಾ ಎಂಬ ಶಂಕೆ ವ್ಯಕ್ತವಾಗಿದೆ.

ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.