ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿ : ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ…

63
firstsuddi

ಹಾಸನ : ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪನವರು ಮುಂದುವರೆಯಲಿದ್ದಾರೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ನಿನ್ನೆ ಸ್ಪಷ್ಟನೆ ನೀಡಿದ ಬಳಿಕ ಯಡಿಯೂರಪ್ಪನವರು ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ತಿಳಿಸಿದ್ದಾರೆ.

ನಗರದ ಹೊರವಲಯದ ಭುವನಹಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರುಣ್ ಸಿಂಗ್ ಅವರ ಹೇಳಿಕೆಯಿಂದ ನನಗೆ ನೂರರಷ್ಟು ಬಲ ಬಂದಿದೆ. ಬಿಎಸ್ ವೈ ನೇತೃತ್ವದಲ್ಲಿ ಒಳ್ಳೆಯ ಕೆಲಸವಾಗುತ್ತಿದೆ ಎಂದಿದ್ದಾರೆ. ಇದರಿಂದ ನನ್ನ ಜವಾಬ್ದಾರಿ ಜಾಸ್ತಿ ಆಗಿದೆ. ರಾಜ್ಯದ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಇದೇ ವೇಳೆ ಕೋವಿಡ್ ವಿಚಾರವಾಗಿ ಮಾತನಾಡುತ್ತಾ, ಕೋವಿಡ್ ಸಾವಿನ ಪ್ರಮಾಣದ ಅಂಕಿ-ಅಂಶಗಳನ್ನು ಸುಳ್ಳು ಲೆಕ್ಕ ಕೊಟ್ಟು ನಾವೇನು ಸಾಧಿಸಬೇಕು?. ಇದರಲ್ಲಿ ಯಾವುದೇ ರಾಜಕೀಯ ಮಾಡುತ್ತಿಲ್ಲ ಎಂದರು.

ರಮೇಶ್ ಜಾರಕಿಹೋಳಿ ಪ್ರಕರಣದಲ್ಲಿ ಕಾನೂನು ಅದರದೆ ಆದ ಕ್ರಮ ಕೈಗೊಳ್ಳುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದರು.