ಬೆಂಗಳೂರು : ಮುಂದಿನ ಮೂರು ದಿನಗಳೂ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಎರಡು ದಿನ ವ್ಯಾಪಕ ಮಳೆಯಾಗಿದ್ದು, ಹಲವು ಭಾಗಗಳಲ್ಲಿ ಮುಂದುವರೆಯಲಿದೆ. ಉತ್ತರ ಒಳನಾಡಿನ ರಾಯಚೂರು, ಬೀದರ್ ಹಾಗೂ ಯಾದಗಿರಿ ಹೊರತುಪಡಿಸಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ತಿಳಿಸಿದೆ.
ಕಳೆದೆರಡು ದಿನಗಳಿಂದ ದಕ್ಷಿಣ ಒಳನಾಡಿನ ಹಲವು ಕಡೆ ವರ್ಷಧಾರೆಯಾಗಿದೆ. ನಿನ್ನೆ ಸಂಜೆ ಹಾಗೂ ರಾತ್ರಿ ಬೆಂಗಳೂರಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರ ಸೇರಿದಂತೆ ಕೆಲವೆಡೆ ಚದುರಿದ ಮಳೆಯಾಗಿದೆ.










