ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಅಖಿಲೇಶ್ ಯಾದವ್.

87
firstsuddi

ಲಕ್ನೋ : ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿಕೆ ನೀಡಿದ್ದು, ಭಾರಿ ಕುತೂಹಲ ಕೆರಳಿಸಿದೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅಖಿಲೇಶ್ ಅವರು, ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕ ದಳ (ಆರ್ಎಲ್ಡಿ) ಪಕ್ಷದ ಮೈತ್ರಿಯೊಂದಿಗೆ ಚುನಾವಣೆ ಎದುರಿಸುವುದು ಅಂತಿಮವಾಗಿದೆ. ಅಷ್ಟೇ ಅಲ್ಲದೇ ಅಭ್ಯರ್ಥಿಗಳಿಗೆ ಸೀಟು ಹಂಚಿಕೆ ಕೂಡ ಆಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಖಿಲೇಶ್ ಅವರ ಚಿಕ್ಕಪ್ಪ ಶಿವಪಾಲ್ ಯಾದವ್ ಸ್ಥಾಪಿಸಿರುವ ಪ್ರಗತಿಶೀಲ ಸಮಾಜವಾದಿ ಪಕ್ಷ (ಲೋಹಿಯಾ) (ಪಿಎಸ್ಪಿಎಲ್)ದೊಂದಿಗೆ ಒಟ್ಟಾಗಿ ಚುನಾವಣೆಗೆ ಹೋಗುವ ಸಾಧ್ಯತೆಗಳ ಕುರಿತು ಪ್ರತಿಕ್ರಿಯಿಸಿರುವ ಅವರು, ಈ ವಿಚಾರದಲ್ಲಿ ನನಗೆ ಯಾವುದೇ ತೊಂದರೆ ಇಲ್ಲ, ಅವರಿಗೆ ಮತ್ತು ಅವರ ಜನತೆಗೆ ಸರಿಯಾದ ಗೌರವ ನೀಡಲಾಗುತ್ತದೆ ಎಂದಿದ್ದಾರೆ.