ಒಂದೂವರೆ ವರ್ಷದಲ್ಲಿ 10 ಲಕ್ಷ ಹುದ್ದೆಗಳ ಭರ್ತಿಗೆ ಮೋದಿ ಸರ್ಕಾರ ಸೂಚನೆ…

55
firstsuddi

ನವದೆಹಲಿ : ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ ಈಗ ಇರುವಂತಹ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ಈ ಬಗ್ಗೆ ಪಿಎಂ ಇಂಡಿಯಾ ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ ಉದ್ಯೋಗಿಗಳ ಸ್ಥಿತಿಗತಿಯನ್ನು ಪರಿಶೀಲಿಸಿದ್ದು, ಮುಂದಿನ ಒಂದೂವರೆ ವರ್ಷಗಳಲ್ಲಿ ಮಿಷನ್ ಮೋಡ್‍ನಡಿಯಲ್ಲಿ 10 ಲಕ್ಷ ನೇಮಕಾತಿಗಳನ್ನು ಮಾಡಲು ನಿರ್ದೇಶನ ನೀಡಿದ್ದಾರೆಂದು ಎಂದು ತಿಳಿಸಿದೆ.

ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ.