ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 2 ದಿನ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ತುಮಕೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಸದಾನಂದ ಅಡಿಗ ಹೇಳಿದ್ದಾರೆ.










