ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸಾಧ್ಯತೆ, 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ…

343
firstsuddi

ಬೆಂಗಳೂರು : ಮುಂದಿನ 24ಗಂಟೆಯಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗುಡ್ಡ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿದೆ.