ಮುಂದಿನ 4 ದಿನಗಳಲ್ಲಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಸಾಧ್ಯತೆ…

226
firstsuddi

ಬೆಂಗಳೂರು : ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ವೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ, ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದಲ್ಲಿ ಅಗತ್ಯ ಇರುವಷ್ಟು ವಾಡಿಕೆ ಮಳೆ ಈ ಒಂದು ವಾರದಲ್ಲಿ ಬೀಳುವ ಸಾಧ್ಯತೆಯಿದೆ ಎಂದು ನೈಸರ್ಗಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ ರೆಡ್ಡಿ ಅವರು ಹೇಳಿದ್ದಾರೆ.