ಮುಂಬೈಗೆ ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ-ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ…

223
firstsuddi

ಬೆಂಗಳೂರು : ನಿಸರ್ಗ ಚಂಡಮಾರುತ ಅಪ್ಪಳಿಸುವ ಭೀತಿ ಹಿನ್ನೆಲೆ, ರಾಜ್ಯದ ಕರಾವಳಿ ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿಸರ್ಗ ಚಂಡಮಾರುತ ಇಂದು ಮಧ್ಯಾಹ್ನ 2-3 ಗಂಟೆ ವೇಳೆಗೆ ಅಲಿಬಾಗ್ ಕಡಲ ತೀರ ಹಾದು ಹೋಗಲಿದ್ದು, ಥಾಣೆ, ರಾಯಘಡ ಹಾಗೂ ಮುಂಬೈ ಜಿಲ್ಲೆಗಳಳ್ಲಿ 100-120 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ. ಮುಂದಿನ 24 ಗಂಟೆಗಳಳ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.