ಮುಂಬೈನಲ್ಲಿ ಇಂದಿನಿಂದ ಸೆಕ್ಷನ್ 144 ಜಾರಿ…

112
firstsuddi

ಮುಂಬೈ : ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಗರದಲ್ಲಿ ಇಂದಿನಿಂದ ಜನವರಿ 7ರವರೆಗೆ ಸೆಕ್ಷನ್ 144 ಜಾರಿಯಲ್ಲಿ ಇರಲಿದೆ.

ವಾಣಿಜ್ಯ ನಗರಿಯಲ್ಲಿ ಕೋವಿಡ್ ನಿಯಂತ್ರಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕ್ರಿಮಿನಲ್ ಪ್ರೊಸೀಜರ್ ಕೋಡ್(ಸಿಆರ್‌ಪಿಸಿ) ಸೆಕ್ಷನ್ 144ರ ಅಡಿಯಲ್ಲಿ ಉಪ ಪೊಲೀಸ್ ಆಯುಕ್ತ ಎಸ್ ಚೈತನ್ಯ ಅವರು ಆದೇಶ ಹೊರಡಿಸಿದ್ದಾರೆ.

ಇನ್ನೂ ಹೊಸವರ್ಷದ ಆಚರಣೆಯನ್ನು ನಿರ್ಬಂಧಿಸಲಾಗಿದೆ. ಡಿ.30ರಿಂದ ಜನವರಿ 7ರವರೆಗೆ ಮುಂಬೈನ ಯಾವುದೇ ಹೋಟೆಲ್, ರೆಸ್ಟೋರೆಂಟ್, ಬಾರ್, ಪಬ್, ರೆಸಾರ್ಟ್ ಮತ್ತು ಕ್ಲಬ್ಗಳಲ್ಲಿ ಪಾರ್ಟಿ ಮಾಡುವಂತಿಲ್ಲ. ತೆರೆದ ಅಥವಾ ಮುಚ್ಚಿದ ಪ್ರದೇಶಗಳಲ್ಲಿ ನ್ಯೂ ಇಯರ್ ಪಾರ್ಟಿ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.

ಮುಂಬೈನಲ್ಲಿ ನಿನ್ನೆ ಒಂದೇ ದಿನ 2510 ಕೊರೊನಾ ಕೇಸ್ ಗಳು ದಾಖಲಾಗಿವೆ. ಒಬ್ಬರು ಮೃತಪಟ್ಟಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ತಿಳಿಸಿದೆ. ಸದ್ಯ ಮುಂಬೈನಲ್ಲಿ 8060 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಚೇತರಿಕೆ ಪ್ರಮಾಣ ಶೇ.97ರಷ್ಟಿದೆ.