ಮುಂಬೈ: ಗೋರೆಗಾಂವ್‍ನ ಕಟ್ಟಡದಲ್ಲಿ ಅಗ್ನಿ ದುರಂತ- 6 ಮಂದಿ ಸಾವು…

49
firstsuddi

ಮುಂಬೈ: ಇಲ್ಲಿನ ಗೋರೆಗಾಂವ್‍ನ ಬಹುಮಹಡಿ ಕಟ್ಟಡವೊಂದರಲ್ಲಿ ಇಂದು ಮುಂಜಾನೆ 3ರ ಸುಮಾರಿಗೆ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಆರು ಜನ ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ.

ಮೃತಪಟ್ಟ ಆರು ಮಂದಿಯಲ್ಲಿ ಓರ್ವ ಪುರುಷ, ಮೂವರು ಮಹಿಳೆಯರು ಮತ್ತು ಇಬ್ಬರು ಅಪ್ರಾಪ್ತ ಬಾಲಕಿಯರು ಸೇರಿದ್ದಾರೆ. ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮುಂಬೈನ ಎಚ್‍ಬಿಟಿ ಮತ್ತು ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿ ಅವಘಡಕ್ಕೆ ಕಾರಣ ಏನೆಂಬುದನ್ನು ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.