ನವದೆಹಲಿ: ಮುಂಬೈ ಮೇಲಿನ ಭಯೋತ್ಪಾದಕ ದಾಳಿಯ ಸಂಚುಕೋರ ತಹಾವುರ್ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಿಕೊಳ್ಳಲು ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಅನುಮತಿ ನೀಡಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮರು ದಿನವೇ ಅಮೆರಿಕ ಸುಪ್ರೀಂಕೋರ್ಟ್‍ನಿಂದ ಈ ತೀರ್ಪು ಹೊರಬಿದ್ದಿದೆ. ಪಾಕಿಸ್ತಾನ ಮೂಲದ ಕೆನಡಾದ ಪ್ರಜೆ 2008ರಲ್ಲಿ ಮುಂಬೈ ಮೇಲಾದ ಭೀಕರ ಭಯೋತ್ಪಾದಕ ದಾಳಿಯ ಸೂತ್ರಧಾರನ ಹಸ್ತಾಂತರವನ್ನು ಅಮೆರಿಕ ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ಆದರೆ ರಾಣಾ ಮನವಿಯನ್ನು ವಜಗೊಳಿಸಿರುವ ಕೋರ್ಟ್, ಭಾರತಕ್ಕೆ ಹಸ್ತಾಂತರ ಮಾಡಬಹುದು ಎಂದು ತೀರ್ಪು ನೀಡಿದೆ. ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ರಾಣಾನನ್ನು ಭಾರತಕ್ಕೆ ಹಸ್ತಾಂತರ ಮಾಡುವುದರ ವಿರುದ್ಧ ಕಳೆದ ನವಂಬರ್‌ನಲ್ಲಿ ಅಮೆರಿಕ ಸುಪ್ರೀಂ ಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಒಂದು ದಿನದ ಬಳಿಕ ಅಮೆರಿಕ ಸುಪ್ರೀಂ ಕೋರ್ಟ್ ರಿಟ್ ಅರ್ಜಿಯನ್ನು ತಿರಸ್ಕರಿಸಿದೆ. ಮುಂಬೈ ದಾಳಿ ಅಪರಾಧಿ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಮಾಡಿದ ಮನವಿಗೆ ಅಮೆರಿಕ ಸರ್ಕಾರ ಅನುಮೋದನೆ ನೀಡಿತ್ತು.










