ಬೆಂಗಳೂರು : ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಮಹಾದೇವ ಪ್ರಕಾಶ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಶ್ವಾಸಪೂರ್ವಕ ವಂದನೆಗಳು. ತಮ್ಮ ಮಾಧ್ಯಮ ಸಲಹೆಗಾರನಾಗಿ ಒಂದು ವರ್ಷದಿಂದ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಹೃದಯಪೂರ್ವಕ ಧನ್ಯವಾದಗಳು. ನನ್ನ ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ. ಇಂತಹದೊಂದು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಹೃದಯಪೂರ್ವಕ ಧನ್ಯವಾದಗಳು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.











