ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲೂ ಕೊರೊನಾ ಆತಂಕ-ಸಿಬ್ಬಂದಿ ಪತಿಗೆ ಕೊರೊನಾ ಪಾಸಿಟಿವ್…

123
firstsuddi

ಬೆಂಗಳೂರು : ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯ ಪತಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆ, ಮುನ್ನೆಚ್ಚರಿಕಾ ಕ್ರಮವಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ರಾಸಾಯನಿಕ ಸಿಂಪಡಣೆ ಮಾಡಲಾಗುತ್ತಿದೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ಗೃಹ ಕಚೇರಿಯಿಂದ ವಿಧಾನಸೌಧಕ್ಕೆ ಶಿಫ್ಟ್ ಮಾಡಲಾಗಿದೆ. ಹಾಗೂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯ ಗಂಟಲಿನ ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಇಂದು ವರದಿ ಬರುವ ಸಾಧ್ಯತೆಯಿದ್ದು, ಕೃಷ್ಣಾದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಲ್ಲಾ ಸಿಬ್ಬಂದಿಗಳಿಗೂ ಆತಂಕ ಶುರುವಾಗಿದೆ.