ಮುಖ್ಯಮಂತ್ರಿ ಬದಲಾವಣೆ ಚರ್ಚೆಯಿಂದ ಸರ್ಕಾರದ ಇಮೇಜ್ ಗೂ ಡ್ಯಾಮೇಜ್ ಆಗುತ್ತಿದೆ : ಜಗದೀಶ್ ಶೆಟ್ಟರ್.

144
firstsuddi

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಅಲ್ಲದೇ ಪದೇ ಪದೇ ನಾಯಕತ್ವ ಬದಲಾವಣೆ ಚರ್ಚೆ ನಡೆಯುವುದರಿಂದ ಸರ್ಕಾರದ ಇಮೇಜ್ ಗೂ ಡ್ಯಾಮೇಜ್ ಆಗುತ್ತಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಚರ್ಚೆಯಿಂದ ಸಿಎಂ ಬಿಎಸ್ ಯಡಿಯೂರಪ್ಪ ಮನಸ್ಸಿಗೆ ಬೇಸರವಾಗಿದೆ. ಈ ಚಟುವಟಿಕೆಯಿಂದ ನಮಗೂ ಕೆಲಸ ಮಾಡಲು ಆಗುತ್ತಿಲ್ಲ. ಇದರಿಂದ ಸಂಪೂರ್ಣ ಸರ್ಕಾರದ ಆಡಳಿತಕ್ಕೆ ಹೊಡೆತ ಬೀಳುತ್ತಿದೆ.  ಯಡಿಯೂರಪ್ಪರಿಗೆ ವಯಸ್ಸಾದ್ರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ವಯಸ್ಸು ಅವರ ಕೆಲಸಕ್ಕೆ ಏನೂ ಅಡ್ಡಿ ಬಂದಿಲ್ಲ. ಹೈಕಮಾಂಡ್ ಮಟ್ಟದಲ್ಲೂ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೆ ಬಂದಿಲ್ಲ. ಹೀಗಾಗಿ ಪದೇ ಪದೇ ನಾಯಕತ್ವ ಬದಲಾವಣೆ ಪ್ರಶ್ನೆ ಕೇಳಿ ಬರುತ್ತಾ ಇರುವುದರಿಂದ ಬಿಎಸ್ ವೈ ನಿನ್ನೆ ಆ ರೀತಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಎಲ್ಲಿಂದ ಶುರುವಾಗಿದೆ ಅನ್ನೋದು ಗೊತ್ತಾಗುತ್ತಿಲ್ಲ. ಶಾಸಕರ ಸಹಿ ಸಂಗ್ರಹ ವಿಚಾರ ಸಹ ಕೇವಲ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ. ಆದರೆ ಆ ರೀತಿಯ ಯಾವುದೇ ಬದಲಾವಣೆಗಳು ನಡೆದಿಲ್ಲವೆಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಜೂನ್ 14 ರಂದು ರಾಜ್ಯದಲ್ಲಿ ಲಾಕ್ ಡೌನ್ ಅಂತ್ಯವಾಗಲಿದೆ. ಆದರೆ ಪಾಸಿಟಿವಿಟಿ ರೇಟ್ ಶೇ.5ಕ್ಕಿಂತ ಕಡಿಮೆ ಬರುವವರೆಗೂ ರಾಜ್ಯದಲ್ಲಿ ಅನ್ ಲಾಕ್ ಆಗುವುದಿಲ್ಲ. ಏಕಾಏಕಿ ಅನ್ ಲಾಕ್ ಮಾಡಿದ್ರೆ ಮತ್ತೆ ಕೊರೊನಾ ಹರಡುವ ಸಾಧ್ಯತೆಗಳು ಹೆಚ್ಚಿದೆ. ಹೀಗಾಗಿ ಹಂತಹಂತವಾಗಿ ಅನ್ ಲಾಕ್ ಮಾಡುವ ಯೋಜನೆ ಇದೆ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.