ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ: ಸಿದ್ದರಾಮಯ್ಯ.

35

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದರು. ಈ ಕುರಿತು ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದು ತಿಳಿಸಿದರು. ನಿಗಮ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಗರ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳಿದರು. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಕುಟುಂಬದವರಿಗೆ ಲೋಕಾಯುಕ್ತದವರು ಕ್ಲೀನ್ ಚಿಟ್ ನೀಡಿರುವ ಕುರಿತು ಮಾತನಾಡಿದ ಮುಖ್ಯಮಂತ್ರಿ, ಈ ಕುರಿತು ತನಗೆ ಮಾಹಿತಿ ಇಲ್ಲವೆಂದು ಹೇಳಿದರು.