ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜನರಿಗೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ : ಸಿದ್ದರಾಮಯ್ಯ.

237
firstsuddi

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜನರಿಗೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ, ಇನ್ನೂ ಪೂರ್ಣ ಪ್ರಮಾಣದ ಮಂತ್ರಿಮಂಡಲವೇ ರಚನೆಯಾಗಿಲ್ಲ. ಹೀಗಾದರೆ ಅಭಿವೃದ್ಧಿ ಕೆಲಸ ಆಗುವುದು ಹೇಗೆ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ತಮ್ಮ ಸ್ವಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿದ್ದು 26ನೇ ತಾರೀಖಿಗೆ ಬಿಜೆಪಿ ಅಧಿಕಾರಕ್ಕೆ ಬಂದು 6 ತಿಂಗಳಾಗುತ್ತದೆ, ಆದರೆ ರಾಜ್ಯದಲ್ಲಿ ಸರ್ಕಾರವೇ ಇಲ್ಲವೇನೋ ಎಂಬಂಥ ಪರಿಸ್ಥಿತಿ ಇದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜನರಿಗೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ, ಇನ್ನೂ ಪೂರ್ಣ ಪ್ರಮಾಣದ ಮಂತ್ರಿಮಂಡಲವೇ ರಚನೆಯಾಗಿಲ್ಲ. ಹೀಗಾದರೆ ಅಭಿವೃದ್ಧಿ ಕೆಲಸ ಆಗುವುದು ಹೇಗೆ? ಮಂತ್ರಿಮಂಡಲ ರಚನೆಗೆ ಸಂಬಂಧಿಸಿದಂತೆ ಮಾತುಕತೆಗೆ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಮಿತ್ ಶಾ ಅವರನ್ನು ಭೇಟಿ ಮಾಡಲು ಅವಕಾಶವನ್ನೇ ನೀಡುತ್ತಿಲ್ಲ. ಅಂದು ಯಡಿಯೂರಪ್ಪ ನಾನು ಪ್ರಮಾಣವಚನ ಸ್ವೀಕರಿಸಿದ ದಿನವೇ ನಿಮ್ಮನ್ನು ಮಂತ್ರಿ ಮಾಡ್ತೀನಿ ಎಂದು ಅತೃಪ್ತರಿಗೆ ಹೇಳಿದ್ದರು. ಅಧಿಕಾರದಾಸೆಗೆ ಪಕ್ಷ ಬಿಟ್ಟು ಈಗ ಅತಂತ್ರರಾಗಿರುವವರನ್ನು ನೋಡಿದ್ರೆ ಅಯ್ಯೋ ಅನಿಸುತ್ತೆ ರಾಜ್ಯ ಸರ್ಕಾರದ ಹಲವು ಇಲಾಖೆಗಳು ಮಂತ್ರಿಗಳಿಲ್ಲದೆ ನಿಷ್ಕ್ರಿಯವಾಗಿವೆ. ಜನರ ಕಷ್ಟ ಕೇಳಲು ಜಿಲ್ಲಾ ಉಸ್ತುವಾರಿ ಮಂತ್ರಿಗಳು ತಮ್ಮ ಜಿಲ್ಲೆ ಕಡೆಗೆ ತಲೆ ಹಾಕುತ್ತಿಲ್ಲ.
ಪ್ರವಾಹ ಬಂದು ಇಷ್ಟು ಸಮಯವಾದ್ರೂ ಇನ್ನೂ ಜನ ಬೀದಿಬದಿಯಲ್ಲೇ ವಾಸಿಸುತ್ತಾ ಇದ್ದಾರೆ. ಈ ಸರ್ಕಾರ ಟೇಕ್ ಆಫ್ ಹಂತ ತಲುಪುವುದು ಬಿಡಿ, ಸತ್ತೇ ಹೋಗಿದೆ. ಹುಬ್ಬಳ್ಳಿಗೆ ಭೇಟಿ ನೀಡಿದ್ದ ಅಮಿತ್ ಶಾ ಅವರು ಅಲ್ಲಿನ ಮಹದಾಯಿ ಸಮಸ್ಯೆಯ ಬಗ್ಗೆ ಮಾತನಾಡೋದು ಬಿಟ್ಟು ಪಾಕಿಸ್ತಾನದ ಬಗ್ಗೆ ಮಾತಾಡುತ್ತಾರೆ. ಇದರಿಂದ ಹುಬ್ಬಳ್ಳಿ ಜನರ ಕಷ್ಟ ದೂರಾಗುತ್ತದೆಯೇ? ಪ್ರವಾಹ ಬಂದಾಗ ರಾಜ್ಯದ ಕಡೆ ಕಣ್ಣೆತ್ತಿ ನೋಡದ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಈಗ ಏಕೆ ಬಂದಿದ್ದಾರೆ? ಬಂದವರು ಜನರ ಸಮಸ್ಯೆಗೆ ಪರಿಹಾರ ಹೇಳಿದ್ರಾ? ದೇಶದ 13 ರಾಜ್ಯಗಳು ಸಿಎಎ, ಎನ್ಆರ್ಸಿ ಜಾರಿ ಮಾಡಲ್ಲ ಎಂದು ಹೇಳುತ್ತಿವೆ, ಈ ಎಲ್ಲ ರಾಜ್ಯ ಸರ್ಕಾರಗಳನ್ನು ಕೇಂದ್ರ ಸರ್ಕಾರ ವಜಾ ಮಾಡುತ್ತಾ? ಸಿಎಎ ಜಾರಿ ಮಾಡಿ ಎಂದು ರಾಜ್ಯಪಾಲರು ಸರ್ಕಾರಕ್ಕೆ ನಿರ್ದೇಶನ ನೀಡುವುದು ಅಸಂವಿಧಾನಿಕ. ರಾಜ್ಯಪಾಲರು ಚುನಾಯಿತ ಸರ್ಕಾರದ ಮುಖ್ಯಸ್ಥರಲ್ಲ, ಅವರ ಮಾತನ್ನು ಸರ್ಕಾರ ಕೇಳಲೇಬೇಕೆಂಬ ನಿಯಮವೂ ಇಲ್ಲ. ಬಿಹಾರದಲ್ಲಿ ಬಿಜೆಪಿಯ ಸಮ್ಮಿಶ್ರ ಸರ್ಕಾರವಿದ್ದರೂ ಸಿಎಎ, ಎನ್ಆರ್ಸಿ ಜಾರಿ ಮಾಡಲ್ಲ ಎಂದು ಅಲ್ಲಿನ ಮುಖ್ಯಮಂತ್ರಿಗಳು ಹೇಳಿದ್ದಾರೆ. ಹಾಗಾದರೆ ಬಿಜೆಪಿಯವರು ಅಲ್ಲಿನ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಾಸು ಪಡೆಯಲಿ ನೋಡೋಣ. ಬಿಜೆಪಿ ಸರ್ಕಾರ ಇರುವಲ್ಲೇ ಈ ಕಾಯ್ದೆ ಜಾರಿಯಾಗುತ್ತಿಲ್ಲ, ಬೇರೆ ಕಡೆಯದು ಆಮೇಲಿನ ಮಾತು ಎಂದು ಹೇಳಿದ್ದಾರೆ.