ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ ಘೋಷಣೆ…

205
firstsuddi

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರ ಬಿಜೆಪಿ ಸರ್ಕಾರ ರಚನೆ ವಿಚಾರವಾಗಿ ನಾಳೆ ಸಂಜೆ 5ಗಂಟೆಯೊಳಗೆ ಬಹುಮತವನ್ನು ಸಾಬೀತು ಪಡಿಸಬೇಕೆಂದು ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಕಟಿಸಿತ್ತು. ಈ ವಿಚಾರವಾಗಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ದೇವೇಂದ್ರ ಫಡ್ನವೀಸ್ ಅವರು, ಬಿಜೆಪಿ ಪಕ್ಷ ಚುನಾವಣೆಯಲ್ಲಿ 105 ಸ್ಥಾನವನ್ನು ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಚುನಾವಣೆಯಲ್ಲಿ ಜೊತೆಯಾಗಿದ್ದ ಶಿವಸೇನೆ ಜನಾದೇಶವನ್ನು ಧಿಕ್ಕರಿಸಿದೆ. ನಮ್ಮ ಬಳಿ ಸರ್ಕಾರ ರಚನೆಗೆ ಅಗತ್ಯ ಬಹುಮತವಿಲ್ಲ. ಹೀಗಾಗಿ ನಾನು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದರು.