ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ ; ಮೇ 15ರಂದು ಅಧಿಕಾರ ಸ್ವೀಕಾರ…

52
firstsuddi

ನವದೆಹಲಿ : ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಇಂದು ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ. ಪ್ರಸ್ತುತ ಹಾಲಿ ಸುಶೀಲ್ ಚಂದ್ರ ಅವರು ಮೇ 14 ರಂದು ನಿವೃತ್ತಿ ಹೊಂದಲಿದ್ದಾರೆ. ಮೇ 15 ರಂದು ರಾಜೀವ್ ಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ರಾಜೀವ್ ಕುಮಾರ್ ಅವರು 2020ರಿಂದ ಈವರೆಗೂ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. 1984ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಾರೆ. ಅವರು ಕೇಂದ್ರದ ವಿವಿಧ ಸಚಿವಾಲಯಗಳಲ್ಲಿ, ಬಿಹಾರ ಮತ್ತು ಜಾರ್ಖಂಡ್ ನ ರಾಜ್ಯ ಕೇಡರ್ ನಲ್ಲಿ ಕೆಲಸ ಮಾಡಿದ್ದಾರೆ.

ಸಚಿವಾಲಯದ ಅಧಿಸೂಚನೆಯನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಕೇಂದ್ರ ಸಚಿವ ಕಿರಣ್ ರಿಜಿಜು ಅವರು, ರಾಜೀವ್ ಕುಮಾರ್ ಅವರಿಗೆ ಶುಭಾಶಯ ತಿಳಿಸಿದ್ದಾರೆ.