ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಮೈಸೂರು ಸೇರಿ 9 ಕಡೆ ಇಡಿ ದಾಳಿ.

33

ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಮೈಸೂರು ಹಾಗೂ ಬೆಂಗಳೂರಿನ 9ಕ್ಕೂ ಹೆಚ್ಚು ಕಡೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅವ್ಯವಹಾರದ ಬಗ್ಗೆ ಒಂದು ಕಡೆ ಲೋಕಾಯುಕ್ತ ತನಿಖೆ ನಡೆಸುತ್ತಿದೆ ಮತ್ತೊಂದು ಕಡೆ ಇಡಿ ಸಹಾ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದೆ. ಮುಡಾದಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡಿರುವ ಇಡಿ ಅಧಿಕಾರಿಗಳು 50:50 ರ ಅನುಪಾತ ಹಾಗೂ ಇತರೆ ನಿವೇಶನಗಳ ಮಾರಾಟದ ಸಂಬಂಧ ಮಹತ್ವದ ದಾಖಲೆಗಳು ಹಾಗೂ ಹಣಕಾಸು, ವಹಿವಾಟಿನ ಬಗ್ಗೆ ಮಾಹಿತಿಗಳನ್ನು ಕಲೆಹಾಕಿದ್ದು. ಇಡಿ ಅಧಿಕಾರಿಗಳು ಇಂದು ಬೆಂಗಳೂರು, ಮೈಸೂರಿನಲ್ಲಿ ಮುಡಾದ ಮಾಜಿ ಆಯುಕ್ತರು, ಬಿಲ್ಡರ್ಸ್ ಹಾಗೂ ಮಾಜಿ ಮುಡಾ ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ನಡೆಸಿಸಿ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 18 ರಂದು ಮೈಸೂರಿನ ಮುಡಾ ಕಚೇರಿ ಸೇರಿದಂತೆ ವಿವಿಧೆಡೆ ತನಿಕೆ ನಡೆಸಿದ್ದ ಇಡಿ ಅಧಿಕಾರಿಗಳು ಕೆಲ ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆದುಕೊಂಡಿದ್ದರು. ಅಲ್ಲದೆ ಮುಡಾದ ಆರು ಜನ ಅಧಿಕಾರಿಗಳನ್ನ ಶನಿವಾರ ಬೆಂಗಳೂರಿನ ಇಡಿ ಕಚೇರಿಯಲ್ಲಿ ವಿಚಾರಣೆಗೊಳಪಡಿಸಿದ್ದರು. ಇನ್ನು ಎರಡನೆ ಹಂತದ ಭಾಗವಾಗಿ ಇಂದು ಎರಡನೇ ಹಂತದ ದಾಳಿ ನಡೆದಿದೆ.