ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ,ಸಚಿವ ಬೈರತಿ ಸುರೇಶ್‍ಗೆ ಇಡಿ ನೊಟೀಸ್.

42

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್‍ಗೆ ನೋಟಿಸ್ ಜಾರಿ ಮಾಡಿದೆ. ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಧಾರವಾಡ ಏಕಸದಸ್ಯ ಪೀಠಕ್ಕೆ 2 ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದರು. ಇಂದು ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ ನಾಗಪ್ರಸನ್ನ ಒಪ್ಪಿಗೆ ಸೂಚಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಮಧ್ಯಂತರ ತನಿಖಾ ವರದಿಯನ್ನು ಧಾರವಾಡ ಹೈಕೋರ್ಟ್ ಪೀಠಕ್ಕೆ ಇಂದು ಸಲ್ಲಿಸಲಿದ್ದಾರೆ.