ಮುರುಘಾಶ್ರೀಗೆ ತಕ್ಕ ಶಿಕ್ಷೆಯಾಗಬೇಕು : ಬಿಎಸ್‍ವೈ.

70
firstsuddi

ಉಡುಪಿ : ಮುರುಘಾ ಶ್ರೀಗಳ ಪೋಕ್ಸೋ ಪ್ರಕರಣದ ಕುರಿತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು, ಮುರುಘಾ ಶ್ರೀ ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಎಲ್ಲರೂ ಇದನ್ನು ಖಂಡಿಸಬೇಕು. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಾನು ಹಾಗೂ ಸಿಎಂ ಕರಾವಳಿ ಭಾಗದಲ್ಲಿ ಪ್ರವಾಸ ಮಾಡಿದ್ದೇವೆ. ನಮಗೆ ಹಿಂದೆಂದೂ ಇಲ್ಲದ ಸ್ವಾಗತ ಸಿಕ್ಕಿದೆ. ಕರಾವಳಿ ಭಾಗದಲ್ಲಿ ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲ್ಲುತ್ತಾರೆ. ರಾಜ್ಯದಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದರು.

ಚುನಾವಣೆ ಗೆದ್ದು ಖರ್ಗೆಗೆ ಗಿಫ್ಟ್ ನೀಡುತ್ತೇವೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದ ಯಡಿಯೂರಪ್ಪ, ಸಿದ್ದರಾಮಯ್ಯ ಯಾವುದೋ ಭ್ರಮೆಯಲ್ಲಿದ್ದಾರೆ. ರಾಜ್ಯದ ಜನ ತಮ್ಮ ಜೇಬಿನಲ್ಲಿದ್ದಾರೆಂಬ ಭಾವನೆ ಮನಸ್ಸಲ್ಲಿದ್ದಂತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಗೆಲ್ಲುವುದಿಲ್ಲ. ಸಿದ್ದರಾಮಯ್ಯರಿಂದ ಬಿಜೆಪಿ ಗೆಲುವನ್ನು ತಡೆಯಲು ಅಸಾಧ್ಯ ಎಂದು ಹೇಳಿದರು.

ಹಿಂದೂ ಧರ್ಮದ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರ ಪ್ರಸ್ತಾಪಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಿಂದೂಗಳಿಗೆ ಅಪಮಾನ ಮಾಡುವ ರೀತಿ ಹೇಳಿಕೆ ಖಂಡನೀಯ. ಕಾಂಗ್ರೆಸ್ ನಾಯಕರು ಕೇವಲ ಖಂಡನೆ ಮಾಡಿದರೆ ಸಾಕಾಗಲ್ಲ. ಸತೀಶ್ ಜಾರಕಿಹೊಳಿ ಕೂಡಲೇ ರಾಜ್ಯದ ಜನರ ಕ್ಷಮೆ ಕೇಳಬೇಕು. ಹಗುರವಾಗಿ ಮಾತಾಡಿದ್ರೆ ದೊಡ್ಡವನಾಗುತ್ತೇನೆ ಅಂದುಕೊಂಡ್ರೆ ಭ್ರಮೆ. ಶಾಸಕ ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು. ಹಿಂದೂಗಳಿಗೆ ಅಪಮಾನ ಆಗುವ ಹಾಗೆ ವರ್ತನೆ ಮಾಡಬಾರದು ಎಂದು ಯಡಿಯೂರಪ್ಪ ಹೇಳಿದ್ದಾರೆ.