ಚಿತ್ರದುರ್ಗ : ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 2ನೇ ಪೋಕ್ಸೋ ಕೇಸ್ ಸಂಬಂಧ ತನಿಖೆ ನಡೆಸಿರುವ ಡಿವೈಎಸ್ಪಿ ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
347 ಪುಟಗಳ ಎರಡು ಸೆಟ್ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಫೋಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಮುರುಘಾಶ್ರೀ, ಲೇಡಿ ವಾರ್ಡನ್ (ರಶ್ಮಿ), ಕಾರ್ಯದರ್ಶಿ ಪರಮಶಿವಯ್ಯ ಹಾಗೂ ಮಠದ ಉತ್ತರಾಧಿಕಾರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದರೆ ವಕೀಲ ಗಂಗಾಧರಯ್ಯ ಭಾಗಿ ಆಗಿರುವ ಮಾಹಿತಿ ಇಲ್ಲ, ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಲೇಡಿ ವಾರ್ಡನ್ ರಶ್ಮಿ ಮೂಲಕ ಬಾಲಕಿಯರನ್ನು ಕರೆಸಿ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಮುರುಘಾ ಸ್ವಾಮಿ ವಿರುದ್ಧ ಕೇಳಿಬಂದಿದೆ. ಮತ್ತು ಬರುವ ಔಷಧಿ ಬೆರೆಸಿದ ಸೇಬು ನೀಡಿ ಮಕ್ಕಳನ್ನು ಕಚೇರಿ, ಬೆಡ್ ರೂಂ, ಬಾತ್ ರೂಂಗೆ ಕರೆದೊಯ್ದು ಬಲತ್ಕಾರ ಮಾಡಲಾಗಿದೆ. ವಿರೋಧಿಸಿದವರಿಗೆ ಜೀವ ಬೆದರಿಕೆ ಹಾಕುತ್ತಿದ್ದರು. ಇದೇ ರೀತಿ ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ. ಅಲ್ಲದೇ ಕೆಲ ವರ್ಷದ ಹಿಂದೆ ಓರ್ವ ಬಾಲಕಿ ರೇಪ್ ಅಂಡ್ ಮರ್ಡರ್ ಸಹ ಆಗಿದ್ದಾಳೆ. ಈ ಬಗ್ಗೆ ಸಂತ್ರಸ್ತ ಬಾಲಕಿಯರಿಂದ ಹೇಳಿಕೆ ಪಡೆದು, ಆಂಧ್ರಕ್ಕೆ ತೆರಳಿದ್ದ ಪೊಲೀಸ್ ತಂಡ ಹಲವು ಮಾಹಿತಿಗಳನ್ನ ಕಲೆ ಹಾಕಿದೆ.










