ಮುರುಘಾ ಮಠದ ಶಿವಮೂರ್ತಿ ಶ್ರೀಗಳ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲು…

50
firstsuddi

ಮೈಸೂರು : ಚಿತ್ರದುರ್ಗ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ನಗರದ ನಜರಾಬಾದ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ದೂರು ಪಡೆದ ನಜರಾಬಾದ್ ಠಾಣೆಯ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾಯಿಸಿದ್ದಾರೆ.

ಮಠದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಸದ್ಯ ಶ್ರೀಗಳು ಜೈಲಿನಲ್ಲಿದ್ದಾರೆ.