ಮುರುಘಾ ಶ್ರೀಗಳಿಗೆ ತಪ್ಪದ ಸಂಕಷ್ಟ – ಸೆ.5ರವರೆಗೆ ಪೊಲೀಸ್ ಕಸ್ಟಡಿಗೆ…

54
firstsuddi

ಚಿತ್ರದುರ್ಗ : ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳನ್ನು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸೆ.5ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಈಗಾಗಲೇ ಶ್ರೀಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಒಪ್ಪಿಸಿತ್ತು. ನಂತರ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಕಾರಣ ಐಸಿಯು ಘಟಕದಲ್ಲಿ ದಾಖಲಿಸಲಾಗಿತ್ತು. ಈ ನಡುವೆ ನ್ಯಾಯಾಲಯಕ್ಕೆ ಹಾಜರು ಪಡಿಸಲು ನ್ಯಾಯಾಧೀಶರಾದ ಶ್ರೀಮತಿ ಬಿ.ಕೆ ಕೋಮಲಾ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಮುರುಘಾ ಶರಣರನ್ನು ಆಸ್ಪತ್ರೆಯಿಂದ ನೇರವಾಗಿ ನ್ಯಾಯಾಲಯಕ್ಕೆ ಕರೆತಂದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ಈ ವೇಳೆ ಶ್ರೀಗಳನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ಮನವಿ ಮಾಡಿದ್ದರು. ಆದರೆ, ನ್ಯಾಯಾಧೀಶರು ಸೆಪ್ಟೆಂಬರ್ 5ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ. ಜೊತೆಗೆ ಅಗತ್ಯವಿದ್ದರೆ ಪೊಲೀಸ್ ಕಸ್ಟಡಿಯಲ್ಲೇ ವೈದ್ಯಕೀಯ ನೆರವು ನೀಡುವಂತೆ ಆದೇಶಿಸಿದ್ದಾರೆ.