ಮುರುಘಾ ಶ್ರೀಗಳ ಮೆಡಿಕಲ್ ಟೆಸ್ಟ್ ರಿಪೋರ್ಟ್ ಬಹಿರಂಗ – ಪುರುಷತ್ವ ಪರೀಕ್ಷೆಯಲ್ಲಿ ಶ್ರೀಗಳು ಫಿಟ್.

41
firstsuddi

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳ ಮೆಡಿಕಲ್ ಟೆಸ್ಟ್ ರಿಪೋರ್ಟ್ ಬಹಿರಂಗವಾಗಿದ್ದು, ಪುರುಷತ್ವ ಪರೀಕ್ಷೆಯಲ್ಲಿ ಶ್ರೀಗಳು ಫಿಟ್ ಆಗಿದ್ದಾರೆ ಎಂದು ಹೇಳಲಾಗಿದೆ.

ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಬೆನ್ನಲ್ಲೇ ಪೊಲೀಸರು ಜಿಲ್ಲಾಸ್ಪತ್ರೆಗೆ ಶ್ರೀಗಳನ್ನು ಕರೆದೊಯ್ದಿದ್ದು ಅಲ್ಲಿ ವೈದ್ಯರಾದ ವೇಣು ಅವರ ನೇತೃತ್ವದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಮೂಲಗಳ ಪ್ರಕಾರ ನಿನ್ನೆ ಸಂಜೆಯೇ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು ಎನ್ನಲಾಗಿದ್ದು, ವರದಿಯಲ್ಲಿ ಶ್ರೀಗಳು ಪುರುಷತ್ವ ಪರೀಕ್ಷೆಯಲ್ಲಿ ಫಿಟ್ ಆಗಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಈಗಾಗಲೇ ಎಫ್ ಎಸ್ಎಲ್ ಪರೀಕ್ಷೆಗಾಗಿ ಕೂದಲು, ರಕ್ತ, ಉಗುರಿನ ಮಾದರಿಗಳನ್ನು ಕಳುಹಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಡಿವೈಎಸ್ ಪಿ ಕಚೇರಿಯಲ್ಲಿ ಇಂದು ಬೆಳಗ್ಗೆ ಶ್ರೀಗಳನ್ನು ವಿಚಾರಣೆಗೆ ಒಳಪಡಿಸಲಾಯಿತು. ಡಿವೈಎಸ್ ಪಿ ಅನಿಲ್ ಕುಮಾರ್ ಅವರು ಶ್ರೀಗಳಿಗೆ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ. ಹೆಚ್ಚಿನ ಪ್ರಶ್ನೆಗಳಿಗೆ ಶ್ರೀಗಳು ಇದು ನನ್ನ ವಿರುದ್ಧದ ದೊಡ್ಡ ಷಡ್ಯಂತ್ರ ಎಂದು ಉತ್ತರಿಸಿದ್ದಾರೆ ಎಂದು ವರದಿಯಾಗಿದೆ.