ಚಿತ್ರದುರ್ಗ : ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಿಸಿ ಚಿತ್ರದುರ್ಗ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಮುರುಘಾ ಶ್ರೀಗಳಿಗೆ ವಿಧಿಸಿದ್ದ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಮತ್ತೆ ವಿಚಾರಣೆ ನಡೆಸಿದ ನ್ಯಾಯಾಲಯ, ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಆದೇಶಿಸಿದೆ. ಸದ್ಯ ಶ್ರೀಗಳನ್ನು ಪೊಲೀಸರು ಕೋರ್ಟ್ನಿಂದ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ದಿದ್ದಾರೆ.
ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ (POCSO) ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು.










